ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ನಂದಿಕೂರು-ಕಾಸರಗೋಡು ವಿದ್ಯುತ್ ಲೈನ್ ಕಾಮಗಾರಿಯ ಅವೈಜ್ಞಾನಿಕ ಯೋಜನೆ ಕುರಿತು ಸರಕಾರದ ಗಮನ ಸೆಳೆದರು.
ವಿದ್ಯುತ್ ಕಾಮಗಾರಿಯಿಂದಾಗಿ ಈ ಭಾಗದ ರೈತರಿಗೆ ಆಗುವ ಅನಾನುಕೂಲವನ್ನು ಸವಿವಾರವಾಗಿ ವಿವರಿಸುತ್ತಾ ಕೂಡಲೇ ಟವರ್ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ವೈಜ್ಞಾನಿಕವಾಗಿ ನೆಲದಡಿಯಲ್ಲಿ ವಿದ್ಯುತ್ ಲೈನ್ ನಿರ್ಮಾಣ ಮಾಡುವ ಕುರಿತಂತೆ ಶೂನ್ಯ ವೇಳೆಯಲ್ಲಿ ಇಂಧನ ಸಚಿವರನ್ನು ಒತ್ತಾಯಿಸಿದರು.