ಇಂಜಿನಿಯರ್ ಎನ್.ನಾಗೇಂದ್ರ ಅವರಿಗೆ ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ ಪ್ರದಾನ


ಮಂಗಳೂರು:
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ನಗರ ಯೋಜನಾಧಿಕಾರಿಯಾಗಿದ್ದ ಎನ್.ನಾಗೇಂದ್ರ ಇವರಿಗೆ ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸುರ್ವೆ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ಕೊಡಮಾಡುವ ಪ್ರಶಸ್ತಿಗೆ ಎನ್.ನಾಗೇಂದ್ರರನ್ನು ಆಯ್ಕೆ ಮಾಡಲಾಗಿತ್ತು. ತಾಂತ್ರಿಕ ಕ್ಷೇತ್ರ ಮತ್ತು ಸರಕಾರಿ ವೃತ್ತಿಯಲ್ಲಿ ಸಾರ್ವಜನಿಕ ಸೇವೆಯನ್ನು ಗುರುತಿಸಿ ಇವರಿಗೆ ಪ್ರಶಸ್ತಿ ನೀಡಲಾಗಿದೆ.

ಡಿ.27ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಕನ್ನಡ ಕವಿಗಳ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎನ್.ನಾಗೇಂದ್ರರಿಗೆ ವಿವಿಧ ಇಲಾಖೆಯ ಅಧಿಕಾರಿ ವೃಂದ, ಇಂಜಿನಿಯರ್ ಬಳಗ ಅಭಿನಂದನೆ ಸಲ್ಲಿಸಿದೆ.

error: Content is protected !!