ತುಳು ಚಿತ್ರರಂಗಕ್ಕೆ ನಟ ಸುನೀಲ್ ಶೆಟ್ಟಿ ಎಂಟ್ರಿ!


ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದಲ್ಲಿ ಅಭಿನಯಿಸಲು ಬಾಲಿವುಡ್ ನಟ ಸುನೀಲ್ ಶೆಟ್ಟಿ ಜನವರಿ 14 ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ.
ಅನೆಕ ವರ್ಷಗಳಿಂದ ತುಳು ಸಿನಿಮಾದಲ್ಲಿ ಅಭಿನಯಿಸ ಬೇಕೆಂಬ ಇಚ್ಛೆ ಅವರಲ್ಲಿತ್ತು. ಆದರೆ ಅದಕ್ಕೆ ಕಾಲ ಕೂಡಿ ಬರಲಿಲ್ಲ. ಈಗ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ತುಳು ಸಿನಿಮಾದಲ್ಲಿ ಸುನೀಲ್ ಶೆಟ್ಟಿ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಜನವರಿ 15 ರಿಂದ ಸುನೀಲ್ ಶೆಟ್ಟಿ ಅವರ ಚಿತ್ರೀಕರಣ ನಡೆಯಲಿದೆ. ಇದು ಜೈ ಸಿನಿಮಾಕ್ಕೆ ಕೊನೆಯ ಹಂತದ ಚಿತ್ರೀಕರಣ ಆಗಿದೆ.
“ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಕರಾವಳಿಯನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಕುತ್ತಾರ್, ದಂಬೇಲ್, ಮರಕಡ, ಶೂಲಿನ್ ಪ್ಯಾಲೇಸ್ ಮರವೂರು, ಬೊಂದೇಲ್ ಪಣಂಬೂರು, ಬೈಕಂಪಾಡಿಯಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ.


ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ.
ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.
“‘ಜೈ ಸಿನಿಮಾದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ರಾಜ್ ದೀಪಕ್ ಶೆಟ್ಟಿ, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಮೊದಲಾದವರು ಅಭಿನಯಿಸಲಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ.
ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆ. ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ ಎಂದು ನಟ, ನಿರ್ದೇಶಕ ರೂಪೇಶ್ ಶೆಟ್ಟಿ ತಿಳಿಸಿದ್ದಾರೆ.

error: Content is protected !!