ಬ್ಯಾಂಕ್‌ ದರೋಡೆ: ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್!

ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಇಂದು ಸಂಜೆ ನಡೆದಿದೆ.

ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್‌ ನಗರ ನಿವಾಸಿ ಕಣ್ಣನ್‌ ಮಣಿ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರ್ಯಾಂಚ್‌ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಉಳ್ಳಾಲ ಪೊಲೀಸ್‌ ಠಾಣೆ ವ್ಯಾಪ್ತಿಯ ಕರ್ನಾಟಕ – ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ. ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಯತ್ನ ನಡೆಸಿದಾಗ ಪೊಲೀಸರು ಫೈರಿಂಗ್ ಮಾಡಿದ್ದಾರೆ.

error: Content is protected !!