ಮಂಗಳೂರು: ಶ್ರೀರಾಮ ಸೇನೆ ಕಾರ್ಯಕರ್ತರು ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿ, ಪಾರ್ಲರ್ ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬಿಜೈ ಬಳಿಯ ಕಲರ್ಸ್ ಬ್ಯೂಟಿ ಪಾರ್ಲರ್ ನಲ್ಲಿ ನಡೆದಿದೆ. ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿತ್ತು ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.
ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದ ಶ್ರೀರಾಮ ಸೇನೆ ಪೀಠೋಪಕರಣಗಳಿಗೆ ಹಾನಿ ಮಾಡಿದೆ.