ಬಂಟ್ವಾಳ: ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಘಟನೆ ನಡೆದಿದೆ.
ಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಮೃತಪಟ್ಟ ವ್ಯಕ್ತಿ.
ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ರಾಜೇಶ್ ನ ತಂಗಿ ಮನೆಯಲ್ಲಿ ಫ್ಯಾನ್ ರಿಪೇರಿ ಕಾರ್ಯದಲ್ಲಿ ತೊಡಗಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಿದ್ದಿದ್ದರು ಎನ್ನಲಾಗಿದೆ.
ರಾಜೇಶ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.