ಮಂಗಳೂರು: ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ 10 ದಿನಗಳ ಬಳಿಕ ಪತ್ತೆಯಾಗಿದ್ದಾನೆ. ಆತನನ್ನು ಪೊಲೀಸರು ಕರೆತರುತ್ತಿರುವ ಮಾಹಿತಿ ಲಭಿಸಿದೆ.
ನಾಪತ್ತೆಯಾಗಿದ್ದ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ದಿಗಂತ್ ಪತ್ತೆಗೆ ಆಗ್ರಹಿಸಿ ಫರಂಗಿಪೇಟೆ ಬಂದ್ ಮಾಡಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ಯತೀಶ್ ನೇತೃತ್ವದಲ್ಲಿ ತನಿಖೆ ತೀವ್ರಗೊಳಿಸಲಾಗಿತ್ತು. ವಿಶೇಷ ತನಿಖಾ ದಳ ದಿಗಂತ್ ಪತ್ತೆಕಾರ್ಯದಲ್ಲಿ ತೊಡಗಿತ್ತು.