ಉಡುಪಿ: ಕರ್ನಾಟಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ತಮ್ಮ ಪುತ್ರಿ ಜೊತೆ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.
ಇದೇ ಸಂದರ್ಭ ಉಚ್ಚಂಗಿ ದೇವಿಯ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಮಾರಿಗುಡಿಯ ವತಿಯಿಂದ ಅರುಣ್ ಚಕ್ರವರ್ತಿ ಹಾಗೂ ಅವರ ಪುತ್ರಿಯನ್ನು ಸನ್ಮಾನಿಸಲಾಯಿತು.
ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಉದಯ ಸುಂದರ್ ಶೆಟ್ಟಿಯವರು ದೇವಳದ ಜೀರ್ಣೋದ್ಧಾರ ಸಾಗಿ ಬಂದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರವೀಂದ್ರ ಮಲ್ಲಾರು, ಚರಿತ ದೇವಾಡಿಗ, ಯೋಗೀಶ್ ವಿ. ಶೆಟ್ಟಿ, ಪೊಲೀಸ್ ಅಧಿಕಾರಿಗಳು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.