ಶಾಸಕ ಅಶೋಕ್‌ ರೈ ಮುಸ್ಲಿಮರನ್ನು ಕಡೆಗಣಿಸುತ್ತಿದ್ದಾರೆ ಎಂದು ವಾಯ್ಸ್‌ ಮೆಸೇಜ್‌ ಹಾಕಿದ ಕೈ ಕಾರ್ಯಕರ್ತನ ವಿರುದ್ಧ ಎಫ್‌ ಐ ಆರ್!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ವಾಟ್ಸ್ಯಾಪ್‌ನಲ್ಲಿ ಮುಸ್ಲಿಮರ ವಿರುದ್ಧ ಎತ್ತಿಕಟ್ಟಿ ವಾಯ್ಸ್ ಮೆಸೇಜ್ ಹಾಕಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಎಂಬವರ ವಿರುದ್ದ ಕಾಂಗ್ರೆಸ್ ಮುಖಂಡ ಬಶೀರ್‌ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ʻಅಶೋಕ್‌ ರೈಗೆ ಮುಸ್ಲಿಮರು ಬೇಡವಾಗಿದ್ದಾರೆʼ

ಪುತ್ತೂರು: ಮಹಿಳೆಯ ಚಿಕಿತ್ಸೆಗೆ 5 ಲಕ್ಷ ರೂ. ಮಂಜೂರು: ಅಶೋಕ್ ರೈ ಮನವಿಗೆ ...

ʻಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮುಸ್ಲಿಮರನ್ನು ಕಡೆಗಣಿಸುತ್ತಿದ್ದಾರೆ, ಮುಸ್ಲಿಮರ ಮತದಿಂದ ಗೆದ್ದ ಶಾಸಕರಿಗೆ ಇಂದು ಮುಸ್ಲಿಮರು ಬೇಡವಾಗಿದ್ದಾರೆ. ಅವರಿಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಮುಸ್ಲಿಮರ ಬೆಂಬಲವಿಲ್ಲದೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಸಾಧ್ಯವಿಲ್ಲ. ಮುಸ್ಲಿಮರ ತಾಕತ್ತು ಏನು ಎಂಬುವುದನ್ನು ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರು ತೋರಿಸಬೇಕು, ಪ್ರತೀ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸಬೇಕುʼ ಎಂದು ಕಾಂಗ್ರೆಸ್ ಕಾರ್ಯಕರ್ತರ ಹಕೀಂ ಕೂರ್ನಡ್ಕ್ ವಾಟ್ಸ್ಯಾಪ್‌ನಲ್ಲಿ ಆಡಿಯೋ ಹರಿಬಿಟ್ಟಿದ್ದರು.

ಈ‌ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಬಶೀರ್‌ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು

error: Content is protected !!