ಮೂಲ್ಕಿ: ಪಡುಪಣಂಬೂರು ಸಮೀಪದ ಕಲ್ಲಾಪು ರೈಲ್ವೇ ಗೇಟ್ ಬಳಿಯ ನಿವಾಸಿ ರಿಕ್ಷಾ ಚಾಲಕರೊಬ್ಬರು ಹೃದಯಾಘಾತದಿಂದ ಮೃತರಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಉದಯ ಕುಮಾರ್ ಎಂದು ಹೆಸರಿಸಲಾಗಿದೆ.
ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದ ಅವರು ಎಲ್ಲರೊಂದಿಗೆ ಆತ್ಮೀಯರಾಗಿದ್ದರು. ರಾತ್ರಿ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಪತ್ನಿ ಮಗನನ್ನು ಅಗಲಿದ್ದಾರೆ.