ವಿಧಾನಸಭೆಯಲ್ಲಿ ಮಾತಾಡಿದ ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಅವರು ಗ್ಯಾರಂಟಿ ಯೋಜನೆಗಳ ಮಾದರಿಯಲ್ಲೇ ಪುರುಷರಿಗೆ 2 ಬಾಟಲಿ ಮದ್ಯ ವಿತರಿಸುವ ಯೋಜನೆಯನ್ನು ಜಾರಿಗೊಳಿಸಿ ಎಂದು ಸಲಹೆ ನೀಡಿದ್ದಾರೆ.
ಜನರು ಮದ್ಯ ಸೇವಿಸುತ್ತಾರೆ. ಇದನ್ನು ತಪ್ಪಿಸಲು ಸಾಧ್ಯವಿಲ್ಲ. ಹೀಗಾಗಿ ಪುರುಷರಿಗೆ ಉಚಿತವಾಗಿ ಮದ್ಯ ವಿತರಿಸುವ ಯೋಜನೆಯನ್ನ ರಾಜ್ಯ ಸರ್ಕಾರ ತರಬೇಕು. ಸಹಕಾರ ಸಂಘಗಳ ಮೂಲಕ ಉಚಿತ ಮದ್ಯ ವಿತರಿಸಬೇಕು ಎಂದು ಜೆಡಿಎಸ್ ಶಾಸಕ ಕೃಷ್ಣಪ್ಪ ಸಲಹೆ ನೀಡಿದ್ದಾರೆ.