
ಬೆಳಗಾವಿ: ನಗರದ ಪಾಂಗೂಳ್ ಗಲ್ಲಿಯಲ್ಲಿರುವ ದಕ್ಷಿಣ ಭಾರತದ ಏಕೈಕ ಅಶ್ವತ್ಥಾಮ ದೇವಸ್ಥಾನಕ್ಕೆ ಮುಸ್ಲಿಂ ಯುವಕ ಕಲ್ಲು ಹೊಡೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕಲ್ಲು ಎಸೆದ ಬಳಿಕ ಆತ ಪರಾರಿಯಾಗಲು ಯತ್ನಿಸಿದ್ದಾನೆ, ಆಗ ಸ್ಥಳೀಯರು ಆತನನ್ನು ಹಿಡಿದು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ.
ಬೆಳಗಾವಿ ಉಜ್ವಲನಗರದ ನಿವಾಸಿ ಯಾಸೀರ್ ಯೂಸುಫ್ (19) ಎಂಬಾತನೇ ಆರೋಪಿ ಎಂದು ಗುರುತಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಎರಡೂ ಸಮುದಾಯದ ಜನರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಮತ್ತು ಕೆಎಸ್‌ಆರ್‌ಪಿ ತುಕಡಿಯನ್ನು ದೇವಸ್ಥಾನದ ಬಳಿ ನಿಯೋಜಿಸಲಾಗಿದೆ. ಈ ಪ್ರಕರಣವನ್ನು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.