ʼಕೂಳೂರು ಸೇತುವೆ ಬಳಿ ದರ್ಪ ಮೆರೆದ ಸಂಚಾರ ಪೊಲೀಸರುʼ: ವೈರಲ್‌ ವಿಡಿಯೋ ಬಗ್ಗೆ ಪೊಲೀಸರ ಸ್ಪಷೀಕರಣ ಏನು?

ಕೂಳೂರು: ʼಕೂಳೂರು ಸೇತುವೆ ಬಳಿ ದರ್ಪ ಮೆರೆದ ಸಂಚಾರ ಪೊಲೀಸರುʼ ಎಂಬ ಒಕ್ಕಣೆಯುಳ್ಳ ವಿಡಿಯೋವೊಂದು ಭಾರೀ ವೈರಲ್‌ ಆಗುತ್ತಿರುವ ಹಿನ್ನೆಲೆ ಮಂಗಳೂರು ನಗರ ಪೊಲೀಸರು ಸ್ಪಷ್ಟೀಕರಣ ನೀಡಿದ್ದಾರೆ.


ಇದೊಂದು ಹಳೆಯ ವಿಡಿಯೋ ಆಗಿದ್ದು, ಈ ಘಟನೆ 2024ರ ಡಿ.23ರಂದು ಕುದುರೆಮುಖ ಜಂಕ್ಷನ್‌ನಲ್ಲಿ ನಡೆದಿತ್ತು.

ಪಾನಮತ್ತನಾದ ಓರ್ವ ವ್ಯಕ್ತಿ ಕುದುರೆಮುಖ ಜಂಕ್ಷನ್ ನಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯುಂಟು ಮಾಡುತ್ತಿದ್ದು, ಸಾರ್ವಜನಿಕರ ಸಹಾಯದೊಂದಿಗೆ ಪೊಲೀಸರು ಆ ವ್ಯಕ್ತಿಯನ್ನು ಬದಿಗೆ ಕಳುಹಿಸಲಾಗಿತ್ತು. ಆದರೆ ಆ ವ್ಯಕ್ತಿ ಪದೇ ಪದೇ ರಸ್ತೆಗೆ ಬಂದು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ. ಆ ವ್ಯಕ್ತಿ ಮಿತಿಮೀರಿ ಕುಡಿದಿದ್ದರಿಂದ ಆಯತಪ್ಪಿ ಕೆಳಗೆ ಬಿದ್ದು ಆತನಿಗೆ ಮೂಗಿನಲ್ಲಿ ರಕ್ತ ಬಂದಿತ್ತು. ಈ ವ್ಯಕ್ತಿಯನ್ನು ಪೊಲೀಸರು ಸಾರ್ವಜನಿಕರ ಸಹಾಯದೊಂದಿಗೆ ಮೇಲಕ್ಕೆತ್ತಿ ಉಪಚರಿಸಿ ಆಸ್ಪತ್ರೆಗೆ ಸಾಗಿಸಲು ವಾಹನದ ಬಳಿ ಕರೆದುಕೊಂಡು ಬರುತ್ತಿದ್ದರೆ. ಆದರೆ ಯಾರೋ ಸಾರ್ವಜನಿಕರು ಈ ದೃಶ್ಯವನ್ನು ತಪ್ಪಾಗಿ ಗ್ರಹಿಸಿ ವೀಡಿಯೊ ಮಾಡಿ ವೈರಲ್‌ ಮಾಡಿದ್ದಾರೆ ಎಂದು ಪೊಲೀಸ್‌ ಇಲಾಖೆ ಸ್ಪಷ್ಟೀಕರಣ ನೀಡಿದೆ.

error: Content is protected !!