ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರು ಪ್ರತಿಷ್ಠಿತ ಶ್ರೀ ಕೆಂಗಲ್ ಹನುಮಂತ 2025 ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಸರ್ವೇಜನಾ ಆರ್ಟ್ಸ್ ಮತ್ತು ಕಲ್ಚರಲ್ (ರಿ) ಇದರ ಸಹಭಾಗಿತ್ವದಲ್ಲಿ 8ನೇ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಮಹೋತ್ಸವ ಅಂಗವಾಗಿ ನಾಡಿಗಾಗಿ ನಾಡಿನ ಏಳಿಗೆಗಾಗಿ ಗಣನೀಯ ಸೇವೆ ಸಲ್ಲಿಸಿದ ಪತ್ರಿಕೋದ್ಯಮ, ಸಾಹಿತ್ಯ, ಸಂಘಟನೆ, ಸಮಾಜ ಸೇವೆಗಾಗಿ ಮಾಜಿ ಮುಖ್ಯಮಂತ್ರಿ ವಿಧಾನಸೌಧ ನಿರ್ಮಾತೃ ದಿವಂಗತ ಶ್ರೀ ಕೆಂಗಲ್ ಹನುಮಂತಯ್ಯ ಸದ್ಭಾವನ ರಾಷ್ಟ್ರ ಪ್ರಶಸ್ತಿಗೆ ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಬೆಂಗಳೂರಿನ ಕನ್ನಡ ಭವನದಲ್ಲಿ ಮಾರ್ಚ್ ೨೪ರಂದು ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಧಾನ ಮಾಡಲಾಗುವುದು. ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ, ಖ್ಯಾತ ನಟ ಗಾಯಕ, ಸಾಧುಕೋಕಿಲ, ಜನಪ್ರಿಯ ಗಾಯಕ ಶಶಿಧರ ಕೋಟೆ ಉಪಸ್ಥಿತರಿರುವರು.