ಹಲ್ಲೆಯನ್ನು ಸಮರ್ಥಿಸಿದ್ದ ಪ್ರಮೋದ್ ಮಧ್ವರಾಜ್ ಮೇಲೆ ಸುಮೋಟೋ ಕೇಸ್!


ಉಡುಪಿ
: ನಿನ್ನೆ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಪ್ರತಿಭಟನೆ ಸಂದರ್ಭ ಪ್ರಮೋದ್ ಮಧ್ವರಾಜ್ ದ್ವೇಷ ಹರಡುವ ಭಾಷಣ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂಪ್ರೇರಿತರಾಗಿ ಸುಮೋಟೋ ಕೇಸು ದಾಖಲಿಸಿದ್ದಾರೆ.
ಮೀನು ಕದ್ದ ಪ್ರಕರಣದಲ್ಲಿ ಐವರು ಮೀನುಗಾರರ ಮೇಲೆ ಪೊಲೀಸರು ಅಟ್ರಾಸಿಟಿ ಕೇಸ್ ಹಾಕಿದ್ದರು. ಇದನ್ನು ಖಂಡಿಸಿ ಮಲ್ಪೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ, ಸದ್ಯ ಬಿಜೆಪಿ ಸೇರಿರುವ ಪ್ರಮೋದ್ ಮಧ್ವರಾಜ್ ಅವರು, ಹಲ್ಲೆಯನ್ನು ಸಮರ್ಥಿಸಿದ್ದರು. ಕಳ್ಳರನ್ನು ಕಟ್ಟಿ ಹಾಕಲೇಬೇಕು. ಮಚ್ಚಿನಲ್ಲಿ, ಖಡ್ಗದಲ್ಲಿ, ತಲೆವಾರಿನಲ್ಲಿ ಹೊಡೆದಿದ್ದಾ? ಎರಡು ಕೆನ್ನೆಗೆ ಬಾರಿಸಿದ್ದಾರೆ ಎಂದು ಹೇಳಿದ್ದರು.
ಈ ಹೇಳಿಕೆ ಹಿನ್ನೆಲೆಯಲ್ಲಿ ಮಲ್ಪೆ ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದಾರೆ. ಬಿಎನ್ ಎಸ್ 57, 191 (1)192 ನಂತೆ ಪ್ರಕರಣ ದಾಖಲಿಸಲಾಗಿದೆ.

error: Content is protected !!