ಬೆಂಗಳೂರು: ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತು ವಿನಯ್ ಗೌಡ ನನ್ನು ಬಸವೇಶ್ವರ ನಗರ ಪೊಲೀಸರು ಇಂದು ಮತ್ತೆ ಬಂಧಿಸಿದ್ದಾರೆ.
ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದಕ್ಕೆ ಶಸ್ತ್ರಾಸ್ತ್ರ ಕಾಯ್ದೆಯಡಿ ವಿನಯ್ ಮತ್ತು ರಜತ್‌ರನ್ನು ಮಾ.24ರಂದು ಬಂಧಿಸಿದ್ದರು. ಬಳಿಕ ಮಧ್ಯರಾತ್ರಿ ಬಿಡುಗಡೆ ಮಾಡಲಾಗಿತ್ತು. ಇಂದು ಮತ್ತೆ ವಿಚಾರಣೆಗೆ ಬಂದ ವೇಳೆ ರಜತ್ ಮತ್ತು ವಿನಯ್‌ರನ್ನು ಬಂಧಿಸಿದ್ದಾರೆ.