ಬೆಳ್ತಂಗಡಿ: ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯ ಚರ್ಚ್ ರಸ್ತೆಯ ಕಲ್ಕುಣಿ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.
ಬೆಳ್ತಂಗಡಿಯ ಕಲ್ಲಗುಡ್ಡೆ ನಿವಾಸಿ ಸಯ್ಯದ್ ಪಾಶ(42) ಮೃತ ದುರ್ಧೈವಿಯಾಗಿದ್ದಾರೆ. ಸಯ್ಯದ್ ಪಾಶ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದ ಕಾರಣ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.