ನಾಳೆಯಿಂದ ನಂದಿನಿ ಹಾಲಿನ ದರ 4 ರೂ. ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಮತ್ತೊಮ್ಮೆ ಏರಿಕೆ ಮಾಡಲಾಗಿದೆ. ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲು ಒಕ್ಕೂಟಗಳ ಮನವಿಯನ್ನು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಪ್ರತಿ ಲೀಟರ್‌ ನಂದಿನಿ ಹಾಲಿನ ದರ ಇನ್ನು ಮುಂದಕ್ಕೆ 4 ರೂ. ಹೆಚ್ಚಾಗಲಿದೆ. ಮಾ.28 ರಿಂದ ಪರಿಷ್ಕೃತ ದರ ಜಾರಿಯಾಗಲಿದೆ.

ನೂತನ ದರ
– ನೀಲಿ‌ ಪ್ಯಾಕೆಟ್ ಹಾಲು – 44 ರೂ ನಿಂದ 48 ರೂ
– ಆರೆಂಜ್ ಪ್ಯಾಕೆಟ್ ಹಾಲು – 54 ರೂ‌. ನಿಂದ 58 ರೂ.
– ಸಮೃದ್ಧಿ ಹಾಲಿನ‌ ಪ್ಯಾಕೆಟ್ 56 ರೂ. ನಿಂದ 60 ರೂ.
– ಗ್ರೀನ್ ಸ್ಪೇಷಲ್ 54 ರೂ. ನಿಂದ 58 ರೂ.
– ನಾರ್ಮಲ್ ಗ್ರೀನ್ 52 ರೂ. ನಿಂದ 56 ರೂ.

error: Content is protected !!