ಕೊಡಗು: ಹಂತಕನೋರ್ವ ಕತ್ತಿಯಿಂದ ಕಡಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಕೊಲೆಗೈದ ಭೀಬತ್ಸ ಕೃತ್ಯ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರಿನ ಕಾಫಿ ತೋಟ ಲೈನ್ ಮನೆಯಲ್ಲಿ ಘಟನೆ ನಡೆದಿದೆ.
ಕರಿಯ(75), ಗೌರಿ(70), ನಾಗಿ(35), ಹಾಗೂ 6 ವರ್ಷದ ಕಾವೇರಿ ಹತ್ಯೆಗೀಡಾದ ವ್ಯಕ್ತಿಗಳು. ಗಿರೀಶ್(35) ಎನ್ನುವ ವ್ಯಕ್ತಿಯಿಂದ ಈ ಭೀಕರ ಕೃತ್ಯ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದು, ನಾಲ್ವರ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗಿರೀಶ್ ಹತ್ಯೆಯಾದ ನಾಗಿಯ ಮೂರನೇ ಪತಿ ಎನ್ನಲಾಗಿದೆ. ಸ್ಥಳಕ್ಕೆ ಎಸ್ಪಿ ರಾಮರಾಜನ್ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
ನಾಗಿಯೊಂದಿಗೆ ಗಿರೀಶ್ ಮೂರನೇ ಮದುವೆಯಾಗಿ ತೋಟದ ಮನೆಯಲ್ಲೇ ಜೀವನ ನಡೆಸುತ್ತಿದ್ದ. ಕಾಫಿ ಬೀಜ ಮಾರಾಟ ಮಾಡಿದ ಹಣದ ವಿಚಾರಕ್ಕಾಗಿ ನಾಲ್ವರ ನಡುವೆ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆ ಗಲಾಟೆ ನಡೆದಿತ್ತು, ಇದೇ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.
ನಾಲ್ವರನ್ನು ಹತ್ಯೆ ಮಾಡಿರುವ ಗಿರೀಶ್ ಎಸ್ಕೇಪ್ ಆಗಿದ್ದಾನೆ. ನಿನ್ನೆ ರಾತ್ರಿಯೇ ಹತ್ಯೆ ಮಾಡಿರುವ ಸಾಧ್ಯತೆ ಇದೆ. ಗ್ರಾಮದ ವ್ಯಕ್ತಿಯೊಬ್ಬರು ಕುಟುಂಬದವರನ್ನು ಬೆಳಿಗ್ಗೆ ಕೆಲಸಕ್ಕೆ ಕರೆಯಲು ಹೋದಾಗ ಹತ್ಯೆ ಬೆಳಕಿಗೆ ಬಂದಿದೆ.