ಕೃತಕ ಗರ್ಭಧಾರಣೆಗೆಂದು ಹಸು ಸಾಗಿಸುತ್ತಿದ್ದ ಇಬ್ಬರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ

ಮೂಡಬಿದಿರೆ: ದನ‌ಸಾಗಾಟದ ಆರೋಪದಲ್ಲಿ ಇಬ್ಬರು ಗಂಭೀರ ಹಲ್ಲೆಗೊಳಗಾದ ಘಟನೆ ಮೂಡುಬಿದಿರೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳುವಾಯಿಯಲ್ಲಿ ಸಂಭವಿಸಿದೆ. ಮೂಡಬಿದ್ರೆ ಮೂಲದ ಅಬ್ದುಲ್ ರಹಿಮಾನ್ ಮತ್ತು ಕೂಸಪ್ಪ ಪೂಜಾರಿ ಗಂಭೀರವಾಗಿ ಹಲ್ಲೆಗೀಡಾದವರೆಂದು ತಿಳಿದುಬಂದಿದ್ದು, ಇವರಿಬ್ಬರನ್ನು ಮೂಡುಬಿದಿರೆ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಬ್ದುಲ್ ರಹಿಮಾನ್ ಮತ್ತು ಕೂಸಪ್ಪ ಅವರು ಹೈಬ್ರೀಡ್ ಹಸುವನ್ನು ಕೃತಕ ಗರ್ಭಧಾರಣೆಗೆಂದು ವಾಹನವೊಂದರಲ್ಲಿ ಕಾರ್ಕಳದ ತಮ್ಮ ಪರಿಚಯದವರ ಮನೆಯಿಂದ ಮೂಡುಬಿದಿರೆಗೆ ತರುತ್ತಿದ್ದರು. ಈ ವೇಳೆ ಬೆಳುವಾಯಿ ಎಂಬಲ್ಲಿ ವಾಹನಕ್ಕೆ ಅಡ್ಡಗಟ್ಟಿದ ಆರೋಪಿಗಳು ಇಬ್ಬರಿಗೂ ಗಂಭೀರ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಾನೂನು ಪ್ರಕಾರ ದಾಖಲೆ ಪತ್ರಗಳನ್ನು ಇಟ್ಟುಕೊಂಡು ಹಸು ಸಾಗಾಟ ಮಾಡುತ್ತಿರುವುದಾಗಿ ಹೇಳಿದರೂ, ಹಬ್ಬಕ್ಕೆ ಕಡಿಯಲು ಕೊಂಡುಹೋಗುತ್ತಿರುವುದಾಗಿ ಹೇಳಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತಂತೆ ಮೂಡಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!