ಕಾಲೇಜ್‌ ವಿದ್ಯಾರ್ಥಿಗಳಿಗೆ ಹೈಡ್ರೋಲಿಕ್‌ ಗಾಂಜಾ ಮಾರುತ್ತಿದ್ದ ಇಬ್ಬರು ಸೆರೆ

ಮಂಗಳೂರು: ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹೈಡ್ರೋಲಿಕ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಸಿಸಿಬಿ ಪೊಲೀಸರು ನಿನ್ನೆ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಸುಭಾಷ್‌ನಗರದ ತೈಸಿರ್ ಇಸ್ಮಾಯಿಲ್ ಹುಸೈನ್ (23) ಮತ್ತು ಮೂಲತಃ ಬೋಳಂಗಡಿಯ ಪ್ರಸಕ್ತ ಕದ್ರಿ ಶಿವಭಾಗ್‌ನಲ್ಲಿ ವಾಸವಾಗಿರುವ ರೋಯಸ್ಟನ್ ಕ್ಸೇವಿಯರ್ ಲೋಬೋ(22) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 9 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನಿಂದ ಮಾದಕ ವಸ್ತುಗಳನ್ನು ಖರೀದಿಸಿಕೊಂಡು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕದ್ರಿ ಶಿವಭಾಗ್‌ನಲ್ಲಿ ಬಂಧಿಸಿದರು. ಆರೋಪಿಗಳಿಂದ 8 ಲಕ್ಷ ರೂ. ಬೆಲೆಯ ಮಾದಕ ವಸ್ತುಗಳು ಮತ್ತು 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದೆ.

ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್‌ರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ., ಎಸ್ಸೈ ನರೇಂದ್ರ, ಎಎಸ್ಸೈ ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

error: Content is protected !!