ಗದಗ: ಇಂದು ಬೆಳ್ಳಂಬೆಳಗ್ಗೆ ಪೊಲೀಸರ ಪಿಸ್ತೂಲ್ ಢಂ ಎಂದಿದ್ದು, ನಟೋರಿಯಸ್ ರೌಡಿ ಜಯಸಿಂಹ ಮೊಡಕೆರ್ ಮೇಲೆ ಫೈರಿಂಗ್ ನಡೆದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಹಾಗೂ ಡೋಣಿ ಗ್ರಾಮದ ಮಧ್ಯೆ ಈ ಘಟನೆ ನಡೆದಿದೆ.
ರಾಜ್ಯ, ಅಂತಾರಾಜ್ಯ ಪೊಲೀಸರಿಗೆ ಬೇಕಾಗಿದ್ದ ಗ್ಯಾಂಗ್ ಮೊಬೈಲ್ ಸಂಪರ್ಕ ಬಿಟ್ಟು ಇನ್ಸ್ಟಾಗ್ರಾಂ ಮೂಲಕ ಸಂಪರ್ಕ ಸಾಧಿಸುತ್ತಿದ್ದರು. ಹೀಗಾಗಿ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನುಸುತ್ತಿದ್ದ ಗ್ಯಾಂಗ್ ತಪ್ಪಿಸಿಕೊಳ್ಳುತ್ತಿತ್ತು. ದರೋಡೆ, ಮನೆ ಕಳ್ಳತನ ಸೇರಿದಂತೆ ಹಲವು ಅಪರಾಧ ಮಾಡಿದ್ದ ಜಯಸಿಂಹನನ್ನು ರವಿವಾರ (ಮಾ.30) ವಿಜಯನಗರ ಜಿಲ್ಲೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದರು. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಬರುವಾಗ ಘಟನೆ ನಡೆದಿದೆ.
ಮಂಜುನಾಥ ಮೊಡಕೆರ್, ರಮೇಶ್ ಮೊಡಕೆರ್, ಹಾಗೂ ಜಯಸಿಂಹ ಮೊಡಕೆರ್ ಅವರನ್ನು ಪೊಲೀಸರು ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಪೊಲೀಸ್ ವಾಹನದಲ್ಲಿ ಕೈಗೆ ಹಾಕಿದ್ದ ಬೇಡಿಯಿಂದ ಪೊಲೀಸ್ ಸಿಬ್ಬಂದಿ ವೀರೇಶ್ ಬಿಸ್ನಳ್ಳಿ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಪ್ರಯತ್ನ ಪಟ್ಟಿದ್ದಾನೆ. ಈ ವೇಳೆ ಪೊಲೀಸರ ರಕ್ಷಣೆಗಾಗಿ ಪೈರಿಂಗ್ ಸಿಪಿಐ ಮಂಜುನಾಥ ಕುಸುಗಲ್ ಅವರು ಪೈರಿಂಗ್ ಮಾಡಿದ್ದಾರೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗದಗ ಎಸ್ಪಿ ಬಿ ಎಸ್ ನೇಮಗೌಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.