ಬೆಂಗಳೂರು: ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ – ಜೂನ್ ತಿಂಗಳಿನಲ್ಲಿ ಉತ್ತರ ಒಳನಾಡು ಜಿಲ್ಲೆಗಳ ಹೆಚ್ಚಿನ ಭಾಗದಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಗರಿಷ್ಠ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡು ಮತ್ತು ಕರಾವಳಿಯ ಬಹುತೇಕ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ತಾಪಮಾನ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ ಕನಿಷ್ಠ ತಾಪಮಾನ ಇರಲಿದೆ ಎಂದು ಹೇಳಿದೆ.