ಹುಬ್ಬಳ್ಳಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ ಬಿಜೆಪಿ ಹೈಕಮಾಂಡ್ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ಯತ್ನಾಳ್ ಅವರು ಕಾಂಗ್ರೆಸ್‌ಗೆ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ. ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ನಾನೇ ಕರೆದು ಕೊಂಡು ಬರುತ್ತೇನೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಗೆ ನೀಡಿರುವ ಬೆನ್ನಲ್ಲೇ ಯತ್ನಾಳ್ ಅವರನ್ನ ಕಾಂಗ್ರೆಸ್ ನಾಯಕರು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಹುಬ್ಬಳ್ಳಿಯ ಹೋಟೆಲೊಂದರಲ್ಲಿ ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಘಟಕ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಅವರು ಯತ್ನಾಳ್ ಅವರನ್ನು ಭೇಟಿಯಾಗಿದ್ದು ರಾಜಕೀಯ ವಲಯಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಆ ಇಬ್ಬರ ನಾಯಕ ಮಾತುಕತೆ ನಡೆಸುತ್ತಿರುವ ಫೋಟೋ ವೈರಲ್ ಆಗಿದೆ. ಬೆಂಗಳೂರಿಂದ ಬರುವ ಮಾರ್ಗ ಮದ್ಯೆ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿಯಾಗಿದ್ದಾರೆ. ಯತ್ನಾಳ್ ಉಚ್ಚಾಟನೆ ಬೆನ್ನಲ್ಲೆ ಕಾಂಗ್ರೆಸ್ ನಾಯಕರು ಅವರನ್ನ ಭೇಟಿ ಮಾಡಿರುವುದು ಸದ್ಯ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಹಿಂದೂ ಹುಲಿ ಯತ್ನಾಳ್ ಅವರು ಕೈ ಹಿಡಿಯುತ್ತಾರಾ ಎನ್ನುವ ಚರ್ಚೆ ಹುಟ್ಟಿಕೊಂಡಿದೆ.