ಪಶ್ಚಿಮ ಬಂಗಾಳ: ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಏಳು ಸದಸ್ಯರು ಸಾವನ್ನಪ್ಪಿದ್ದಾರೆ.
ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ಪ್ರತಿಮಾ ಮಂಡಲದ ಧೋಲಾಘಾಟ್ ಗ್ರಾಮದ ಮನೆಯೊಂದರಲ್ಲಿ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಸಿಲಿಂಡರ್ ಹಠಾತ್ತನೆ ಸ್ಫೋಟಗೊಂಡಿದೆ. ಭಾರೀ ಬೆಂಕಿ ಕಾಣಿಸಿಕೊಂಡಿತು.
ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಒಂದೇ ಕುಟುಂಬದ ಏಳು ಸದಸ್ಯರು ಸಾವನ್ನಪ್ಪಿದ್ದಾರೆ. ಮನೆಯಿಂದ ಎಲ್ಲಾ ಶವಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.