ಕಾರ್ಕಳ: ಅಜೆಕಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೇಯಸಿಯ ಜೊತೆಗೆ ಸೇರಿಕೊಂಡು ಬಾಲಕೃಷ್ಣ ಪೂಜಾರಿ (44) ಎಂಬವರನ್ನು ಕೊಲೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿ ದಿಲೀಪ್ ಹೆಗ್ಡೆ (28) ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದಿಲೀಪ್ ಹೆಗ್ಡೆಯ ಜಾಮೀನು ಅರ್ಜಿಯನ್ನು ಮಾರ್ಚ್ 4 ರಂದು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿತ್ತು. ಆನಂತರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಅರ್ಜಿಯ ವಿಚಾರಣೆ ನಡೆಸಿ ಜಾಮೀನು ಮಂಜೂರು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬಾಲಕೃಷ್ಣ ಪೂಜಾರಿ ಅವರನ್ನು ಪತ್ನಿ ಪ್ರತಿಮಾ ಮತ್ತು ಪ್ರೇಮಿ ದಿಲೀಪ್ ಹೆಗ್ಡೆ ಅ.20, 2024 ರಂದು ಕೊಲೆ ಮಾಡಿದ್ದ ಆರೋಪ ಎದುರಿಸುತ್ತಿದ್ದರು. ಅಜೆಕಾರ್ ಪೊಲೀಸರು ಅ.25 ರಂದು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಪ್ರತಿಮಾ ಕಾರ್ಕಳದಲ್ಲಿ ಬ್ಯೂಟಿ ಪಾರ್ಲರ್ ಹೊಂದಿದ್ದು ಪತಿಗೆ ಊಟದಲ್ಲಿ ವಿಷ ಕೊಟ್ಟು ಆತ ಸಾಯದೇ ಇದ್ದಾಗ ಕತ್ತು ಬಿಗಿದು ಕೊಂದಿದ್ದಾಗಿ ಒಪ್ಪಿಕೊಂಡಿದ್ದರು.