ಬೆಂಗಳೂರು: ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರಣಭೀಕರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನದ ವೇಳೆಗೆ ಮಳೆ ಸುರಿದಿದೆ. ಪರಿಣಾಮ ನಗರದ ಹಲವೆಡೆ ರಸ್ತೆಗಳು ಚರಂಡಿಯಂತೆ ಮಾರ್ಪಟ್ಟಿದ್ದು, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ನಿನ್ನೆ ಚಾರ್ಮಾಡಿ, ಉಜಿರೆ ಭಾಗದಲ್ಲೂ ಭಾರೀ ಮಳೆಯಾಗಿದೆ.