ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರ ಬ*ಲಿ!

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೆಎಸ್ಆರ್ಟಿಸಿ ಐರಾವತ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಒಂದೇ ಕುಟುಂಬದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ. ಸತ್ಯಾನಂದ ರಾಜೇ ಆರಸ್ (51) ಅವರ ಪತ್ನಿ ನಿಶ್ಚಿತಾ (45), ಚಂದ್ರು(62) ಅವರ ಪತ್ನಿ ಸುವೇದಿನಿ ರಾಣಿ (50) ಮೃತ ದುರ್ದೈವಿಗಳು.

ಹೆದ್ದಾರಿಯಲ್ಲಿ ತೂಬಿನಕೆರೆ ಬಳಿ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲವಾಗಿ ಮತ್ತೆ ಹೆದ್ದಾರಿಗೆ ಚಾಲಕ ಕಾರು ತಿರುಗಿಸಿದ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕೆಎಸ್ಆರ್ಟಿಸಿ ಐರಾವತ ಬಸ್ ಚಾಲನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಐರಾವತ ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

error: Content is protected !!