ಕಾರು-ರಿಕ್ಷಾ ಅಪಘಾತ: ನಾಲ್ವರಿಗೆ ಗಂಭೀರ ಗಾಯ

ಮೂಲ್ಕಿ: ಮಂಗಳೂರಿನಿಂದ ಮೂಲ್ಕಿ ಕಾರ್ನಾಡು ಕಡೆಗೆ ಬರುತ್ತಿದ್ದ ರಿಕ್ಷಾವೊಂದಕ್ಕೆ ಕಾರೊಂದು ಹಿಂಬದಿಯಿಂದ ಢಿಕ್ಕಿಯಾಗಿ ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಚಾಲಕ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಲ್ಕಿಯ ಕೊಲ್ನಾಡು ಹೆದ್ದಾರಿಯಲ್ಲಿ ನಡೆದಿದೆ.

ರಿಕ್ಷಾ ಚಾಲಕ ಅಬ್ದುಲ್ ಬಶೀರ್ (35) ಗಂಭೀರ ಗಾಯಗೊಂಡವರು. ಗಾಯಾಳು ಪ್ರಯಾಣಿಕರಾದ ಮರಕಡದ ಶೋಭಾ (55), ಕುಂಜತ್ತಬೈಲ್‌ನ ಭವಾನಿ (65) ಮತ್ತು ಪಣಂಬೂರಿನ ವಸಂತಿ (72) ಕೂಡಾ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಶರತ್ ಉಪಾಧ್ಯಾಯ ಎಂಬವರ ಕಾರ್‌ ಇದಾಗಿದ್ದು, ನಿಯಂತ್ರಣ ಕಳೆದುಕೊಂಡು, ಮೂಲ್ಕಿಯತ್ತ ಹೋಗುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಈ ಕುರಿತು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

error: Content is protected !!