ಪಿಯುಸಿ ಫಲಿತಾಂಶ: ಕಲಾ ವಿಭಾಗದಲ್ಲಿ ಲಾರಿ ಡ್ರೈವರ್‌ ಮಗಳು ರಾಜ್ಯಕ್ಕೆ ಪ್ರಥಮ

ವಿಜಯನಗರ: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಲಾರಿ ಡ್ರೈವರ್ ಮಗಳು ಸಂಜನಾ ಬಾಯಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.

ವಿಜಯನಗರ ಜಿಲ್ಲೆಯ(ಬಳ್ಳಾರಿ) ಕೊಟ್ಟೂರು ತಾಲೂಕಿನಲ್ಲಿರುವ ಇಂದು ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಸಂಜನಾಬಾಯಿ 600ರಕ್ಕೆ 597 ಅಂಕ ಪಡೆಯುವ ಮೂಲಕ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.

ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದರೆ, ಕಾಮರ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಮೊದಲ ಸ್ಥಾನ ಗಳಿಸಿದ್ದಾರೆ.

error: Content is protected !!