ಅಂಗಡಿಗಳಿಂದ ಖರೀದಿಸಿ ಬಾಟಲಿ ನೀರು ಕುಡಿಯುತ್ತೀರಾ ಹುಷಾರ್!: ಸಚಿವ ದಿನೇಶ್‌ ಹೇಳಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ,ಹಸಿರು ಬಟಾಣಿ ಬಳಿಕ ನೀರಿನ ಬಾಟಲಿಯ ಸರದಿ ಉಂಟಾಗಿದೆ. ಕಲರ್‌ ಕಾಟನ್‌ ಕ್ಯಾಂಡಿ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿತ್ತು ಕೃತಕ ಬಣ್ಣ ಬಳಸುವುದರಿಂದ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುವುದರಿಂದ ಕಲರ್‌ ಕಾಟನ್‌ ಕ್ಯಾಂಡಿಯನ್ನು ನಿಷೇಧಿಸಲಾಗಿತ್ತು ಜೊತೆಗೆ ಗೋಬಿ ಮಂಚೂರಿ ತಯಾರಿಸುವಾಗ ಕೃತಕ ಬಣ್ಣ ಬಳಸುವುದನ್ನು ಕೂಡ ನಿಷೇಧಿಸಿ ಸರ್ಕಾರ ಆದೇಶಿಸಿತ್ತು

 

ರಾಜ್ಯಾದ್ಯಂತ ಮಾರಾಟ ಮಾಡುತ್ತಿರುವ ಗೋಬಿ ಮಂ

ಚೂರಿ, ಕಾಟನ್ ಕ್ಯಾಂಡಿ,ಹಸಿರು ಬಟಾಣಿ ಮಾದರಿಗಳಲ್ಲಿ ಆರೋಗ್ಯಕ್ಕೆ ಮಾರಕವಾದ ಅಂಶ ಹಾಗೂ ಬಳಕೆಯ ಬಣ್ಣ ಸೇರಿದಂತೆ ವ್ಯಸನಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿದ್ದು, ಈ ಅಸುರಕ್ಷಿತ ವಸ್ತುಗಳನ್ನು ಬಳಕೆ ಮಾಡದಂತೆ ಸೂಚಿಸಿದ್ದರು ಆದರೆ ಇದೀಗ ನೀರಿನ ಬಾಟಲಿಯಲ್ಲೂ ಕಳಪೆ ಪಟ್ಟದ ಗುಣಮಟ್ಟ ಪತ್ತೆಯಾಗಿದೆ.

ರಾಜ್ಯದಲ್ಲಿ 296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಟೆಸ್ಟ್ ಮಾಡಿದ್ದು, ಇದರಲ್ಲಿ 72 ಸುರಕ್ಷಿತ ಹಾಗೂ 95 ಮಾದರಿಗಳು ಅಸುರಕ್ಷಿತ ಎಂದು ವರದಿಯಾಗಿದೆ ಇದೀಗ ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ

ಇಲಾಖೆಯ ವರದಿ ತಿಳಿಸಿದೆ. ಈ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ತರ ಸುದ್ದಿಗೋಷ್ಠಿ ನಡೆಸಿದ್ದಾರೆ.

ಹಸಿರು ಬಟಾಣಿಗೆ ಹಸಿರು ಕಲರ್‌ ಬರಿ ಸಲು ಟೆಟಾರ್ಜಿನ್‌ ಕೆಮಿಕಲ್‌ ಬಳಸಿರುವ ಆತಂಕಕಾರಿ ವಿಷಯ ಹೊರಬಿದ್ದಿದೆ. ಕುಡಿಯುವ ನೀರಿನ ಬಾಟಲಿ ಮಾತ್ರವಲ್ಲದೇ ಖಾರ ಮಿಕ್ಚರ್, ಪನ್ನೀರ್ ಹಾಗೂ ಐಸ್​ಕ್ರೀಂ ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ತಯಾರಿಕಾ ಘಟಕಗಳಲ್ಲಿ ಲೋಪ ಕಂಡುಬಂದ ಹಿನ್ನೆಲೆ ನೋಟಿಸ್ ನೀಡಲಾಗಿರುವುದಾಗಿ ಗುಂಡೂರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

error: Content is protected !!