ಸಿಡಿಲು ಬಡಿದು ಯುವಕ ಮೃತ್ಯು

ರಾಯಚೂರು: ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಂಕುಶದೊಡ್ಡಿ ಗ್ರಾಮದ ನಿವಾಸಿ ರಾಮಣ್ಣ ನಾಯಕ(32) ಮೃತಪಟ್ಟ ಯುವಕ.

ಗ್ರಾಮದ ಹೊರವಲಯದಲ್ಲಿ ಕುರಿ ಮೇಯಿಸಲು ಹೋಗಿದ್ದ ರಾಮಣ್ಣ ನಾಯಕ ಹಿಂದಿರುಗಿ ಬರುತ್ತಿದ್ದ ವೇಳೆ ಗುಡುಗು -ಸಿಡಿಲು ಸಹಿತ ಮಳೆ ಸುರಿದಿದೆ. ಈ ವೇಳೆ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದರು ಎಂದು ತಿಳಿದುಬಂದಿದೆ. ಮಸ್ಕಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದರೂ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ.

error: Content is protected !!