ಮುಂಬೈ ದಾಳಿ ಮಾಸ್ಟರ್‌ ಮೈಂಡ್‌ ರಾಣಾ ಭಾರತಕ್ಕೆ ಗಡಿಪಾರು!?

ನವದೆಹಲಿ: 2008 ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆ ತಹವ್ವೂರ್ ಹುಸೇನ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ಸಿದ್ಧತೆ ನಡೆದಿದೆ. ಆತನನ್ನು ಕರೆತರಲು ಭಾರತದ ಬಹು-ಏಜೆನ್ಸಿ ತಂಡವು ಅಮೆರಿಕಕ್ಕೆ ಪ್ರಯಾಣ ಬೆಳೆಸಿದೆ.

ತಂಡವು ದಾಖಲೆಗಳನ್ನು ಪೂರ್ಣಗೊಳಿಸುತ್ತಿದೆ ಮತ್ತು ಅಮೆರಿಕದ ಅಧಿಕಾರಿಗಳೊಂದಿಗೆ ಔಪಚಾರಿಕತೆಗಳು ಮತ್ತು ಕಾನೂನು ಬದ್ಧ ಮಾತುಗತೆಗಳು ನಡೆಯುತ್ತಿವೆ ಹಾಗಾಗಿ ರಾಣಾನನ್ನು ಶೀಘ್ರದಲ್ಲೇ ಅಂದರೆ ಇಂದೇ ಭಾರತಕ್ಕೆ ಗಡೀಪಾರು ಮಾಡುವ ಸಾಧ್ಯತೆ ತುಂಬಾ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರೀಯ ತನಿಖಾ ಸಂಸ್ಥೆ ಇತ್ತೀಚೆಗೆ ಪ್ರಕರಣವನ್ನು ಮುಂಬೈನಿಂದ ದೆಹಲಿಗೆ ವರ್ಗಾಯಿಸಲು ನ್ಯಾಯಾಲಯದ ಆದೇಶಗಳನ್ನು ಪಡೆದುಕೊಂಡಿದೆ. ರಾಣಾ ಭಾರತಕ್ಕೆ ಬಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಎನ್‌ಐಎ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ.

error: Content is protected !!