ಗುಜರಾತ್: ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಮಂಜುನಾಥ ಭಂಡಾರಿ ರವರು ಗುಜರಾತ್ ಅಮದಾಬಾದ್ ನಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದ ಹಿನ್ನೆಲೆಯಲ್ಲಿ ನಿನ್ನೆ ಗುಜರಾತ್ ಪಿಸಿಸಿ ಕಚೇರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ನರೇಂದ್ರಸ್ವಾಮಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸತ್ಯನಾರಾಯಣ, ಬಾಲರಾಜ್ ನಾಯಕ್, ವಿಜಯ್ ಮತ್ತಿಕಟ್ಟಿ ಹಾಗೂ ಕರ್ನಾಟಕ ರಾಜ್ಯದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥಗೌಡ ಮತ್ತಿತರರು ಉಪಸ್ಥಿತರಿದ್ದರು.