ಮುಂಬೈ: ಅಮೆರಿಕದಿಂದ ಗಡೀಪಾರಿಗೊಳಗಾಗಿರುವ 2008ರ ನವೆಂಬರ್ 26ರಂದು ಮುಂಬೈ ಮೇಲೆ ನಡೆದ ದಾಳಿ ಪ್ರಕರಣದ ಪ್ರಮುಖ ಆರೋಪಿ ತಹಾವುರ್ ರಾಣಾನನ್ನು ನ್ಯಾಯಾಲಯವು 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ ವಶಕ್ಕೆ ಒಪ್ಪಿಸಿದ್ದು, ಆತನ ವಿಚಾರಣೆ ಪ್ರಾರಂಭಗೊಂಡಿದೆ. 26/11 ಭಯೋತ್ಪಾದನಾ ದಾಳಿಯ ಸಂಬಂಧ ಅಮೆರಿಕದಿಂದ ಗಡೀಪಾರಿಗೊಳಗಾಗಿರುವ ತಹಾವುರ್ ರಾಣಾನನ್ನು ಭಾರತಕ್ಕೆ ಕರೆ ತರಲಾಗಿದೆ. ತಹಾವುರ್ ರಾಣಾ ನಮ್ಮ ವಶದಲ್ಲಿದ್ದಾನೆ ಎಂದು ರಾಷ್ಟ್ರೀಯ ತನಿಖಾ ದಳ ದೃಢಪಡಿಸಿದೆ.