ಉಳ್ಳಾಲ: ತೆಂಗಿನ ಮರದ ಶೇಂದಿ ತೆಗೆಯುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಕೊಲ್ಯ ಕನೀರು ತೋಟ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಸ್ಥಳೀಯ ನಿವಾಸಿ ಯಶೋಧರ(46) ಮೃತಪಟ್ಟವರು.
ಯಶೋಧರ ಶೇಂದಿ ತೆಗೆದು ಮಾರಾಟ ಮಾಡುತ್ತಿದ್ದು ಇಂದು ಬೆಳಗ್ಗೆ ತನ್ನ ಮನೆ ಬಳಿಯ ತೋಟವೊಂದರಲ್ಲಿ ಮೂರ್ತೆದಾರಿಕೆ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಯಶೋಧರರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ,ಪುತ್ರ, ಪುತ್ರಿಯನ್ನು ಅಗಲಿದ್ದಾರೆ.