ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ನಡೆದ ಐದು ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎನ್‌ಕೌಂಟರ್ ಮಾಡಿರುವ ಪಿಎಸ್‌ಐ ಅನ್ನಪೂರ್ಣ ಅವರ ದಿಟ್ಟತನಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಮೂಲಕ ಅಶೋಕ ನಗರ ಪೊಲೀಸ್ ಠಾಣೆಯ ಲೇಡಿ ಪಿಎಸ್ ಐ ಅನ್ನಪೂರ್ಣ ರಾಜ್ಯಕ್ಕೆ ಮಾದರಿಯಾಗಿದ್ದಾರೆ.
ಮುಂದಿನ ತಿಂಗಳು ಅನ್ನಪೂರ್ಣರ ಮದುವೆ ನಿಗದಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಾಲಕಿ ಕೊಲೆಯಾದ ಬಳಿಕ ಪಿಎಸ್‌ಐ ಅನ್ನಪೂರ್ಣ ಆಸ್ಪತ್ರೆಗೆ ಭೇಟಿಕೊಟ್ಟು ಕಣ್ಣೀರು ಹಾಕಿದ್ದರು. ಕೊಲೆ ಮಾಡಿದ ಆರೋಪಿಯನ್ನು ಬಂಧಿಸಿ, ತಕ್ಕ ಕ್ರಮ ಕೈಗೊಳ್ಳುವುದಾಗಿ ಶಪಥ ಮಾಡಿದ್ದರು. ಆರೋಪಿಯನ್ನು ಬಂಧಿಸಿ ಸ್ಥಳ ಪರಿಶೀಲನೆಗೆಂದು ಕರೆದುಕೊಂದು ಹೋದ ಸಂದರ್ಭ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದು, ಈ ವೇಳೆ ಪಿಎಸ್‌ಐ ಅನ್ನಪೂರ್ಣ, ಆತ್ಮರಕ್ಷಣೆಗಾಗಿ 2 ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದರು. ಆದರೆ ಆತ ತಪ್ಪಿಸಿಕೊಳ್ಳಲು ಹೋದಾಗ ಕಾಲಿನತ್ತ ಹಾರಿಸಿದ್ದ ಗುಂಡು ಬೆನ್ನಿಗೆ ತಾಗಿ ಗಂಭೀರ ಗಾಯಗೊಂಡಿದ್ದ. ಆತ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದು ಅನ್ನಪೂರ್ಣ ಅವರ ಈ ಕಾರ್ಯಕ್ಕೆ ಜನರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.