ಬೆಳಗಾವಿ: ಹಳಿ ತಪ್ಪಿದ ಗೂಡ್ಸ್‌ ರೈಲಿನ ಬೋಗಿಗಳು!

ಬೆಳಗಾವಿ: ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಚಲಿಸುತ್ತಿದ್ದ ಗೂಡ್ಸ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಗೂಡ್ಸ್ ರೈಲಿನಲ್ಲಿ ಯಾವುದೇ ಸರಕು ಇರಲಿಲ್ಲ ಎಂದು ತಿಳಿದು ಬಂದಿದೆ. ಬೆಳಗಾವಿ ರೈಲ್ವೆ ನಿಲ್ದಾಣದಿಂದ ಸಂಚಾರ ಆರಂಭಿಸುತ್ತಿದ್ದಂತೆಯೇ ಕೆಲವೇ ನಿಮಿಷಗಳಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಕೂಡಲೇ ಪೊಲೀಸರು, ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವವರಿಗೆ ಈ ಭಾಗದ ರೈಲು ಸಂಚಾರ ವ್ಯತ್ಯಯಗೊಳ್ಳುವ ಸಾಧ್ಯತೆ ಇದೆ. ಈ ಭಾಗದ ಎರಡು ಬದಿಯ ಎರಡೂ ಮಾರ್ಗಗಳು ಸ್ಥಗಿತಗೊಂಡಿವೆ. ಸ್ಥಳದಲ್ಲಿ ಬೋಗಿಗಳನ್ನು ಬೇರೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.

error: Content is protected !!