ಮಂಗಳೂರು: ವಕ್ಫ್ ಕಾಯ್ದೆ ತಿದ್ದುಪಡಿ ವಿರುದ್ಧ ನಗರದ ಅಡ್ಯಾರ್ ಕಣ್ಣೂರು ಬಳಿ ಇರುವ ಷಾ ಗಾರ್ಡನ್ ಮೈದಾನದಲ್ಲಿ ನಾಳೆ ಬೃಹತ್ ಪ್ರತಿಭಟನೆ ನಡೆಯಲಿದ್ದು ಸಂಚಾರ ದಟ್ಟಣೆ ಆಗಬಹುದಾದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಡೀಲ್ – ಕಣ್ಣೂರು – ಅಡ್ಯಾರ್ – ಸಹ್ಯಾದ್ರಿ – ಅರ್ಕುಳ ಮಾರ್ಗಗಳ ಬದಲಾಗಿ ಕೆಳಕಂಡ ಪರ್ಯಾಯ ಮಾರ್ಗಗಳನ್ನು ಉಪಯೋಗಿಸಲು ಕೋರಲಾಗಿದೆ.
ಪಂಪುವೆಲ್ , ನಂತೂರು – ಪಡೀಲ್ – ಕಣ್ಣೂರು – ಅಡ್ಯಾರ್ – ಸಹ್ಯಾದ್ರಿ – ಅರ್ಕುಳ – ಫರಂಗಿಪೇಟೆ -ತುಂಬೆ – ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ – 73) ರಸ್ತೆಯಲ್ಲಿ ಮಂಗಳೂರು ನಗರಕ್ಕೆ ಬರುವ ಹಾಗೂ ಹೋಗುವ ಘನ ವಾಹನಗಳು, ಎಲ್ಲಾ ತರಹದ ಸರಕು ವಾಹನಗಳು ಹಾಗೂ ಬಸ್ಸುಗಳ ಸಂಚಾರಕ್ಕಾಗಿ ಬದಲಿ ಮಾರ್ಗ ಉಪಯೋಗಿಸುವುದು.
ಪಡೀಲ್ – ಕಣ್ಣೂರು – ಅಡ್ಯಾರ್ ಕಟ್ಟೆ ರಸ್ತೆಯಲ್ಲಿ ಮಂಗಳೂರು ನಗರಕ್ಕೆ ಬರುವ ಹಾಗೂ ಹೊರಡುವ ಎಲ್ಲಾ ತರಹದ ಲಘ ವಾಹನಗಳು ಮತ್ತು ದ್ವಿ-ಚಕ್ರ ವಾಹನಗಳ ಚಾಲಕರು , ಸವಾರರು ಬದಲಿ ಮಾರ್ಗ ಉಪಯೋಗಿಸುವುದು. ಪಂಪುವೆಲ್ , ನಂತೂರು – ಪಡೀಲ್ – ಕಣ್ಣೂರು -ಅಡ್ಯಾರ್ – ಸಹ್ಯಾದ್ರಿ – ಅರ್ಕುಳ – ಫರಂಗಿಪೇಟೆ – ತುಂಬೆ – ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ – 73) ರಸ್ತೆಯ ಎರಡು ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಬಾರದು.
ಸಾರ್ವಜನಿಕರು ಈ ಕೆಳಗಿನಂತೆ ಪರ್ಯಾಯ ರಸ್ತೆಗಳನ್ನು ಬಳಸಲು ಕೋರಲಾಗಿದೆ. ಮೆಲ್ಕಾರು ಜಂಕ್ಷನ್- ಪುತ್ತೂರು,ಬಂಟ್ವಾಳ,ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ, ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್ ಜಂಕ್ಷನ್ – ಬೊಳಿಯಾರ್ – ಮುಡಿಪು – ದೇರಳಕಟ್ಟೆ – ತೊಕ್ಕೊಟ್ಟು ಮೂಲಕ ಸಂಚರಿಸುವುದು. ಬಿ.ಸಿ. ರೋಡ್ ಪೊಳಲಿ ದ್ವಾರ-ಬಿ.ಸಿ.ರೋಡ್ ಕಡೆಯಿಂದ ಮಂಗಳೂರು,ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್ – ನೀರುಮಾರ್ಗ – ಬೈತುರ್ಲಿ – ಕುಲಶೇಖರ – ನಂತೂರು ಮೂಲಕ ಸಂಚರಿಸುವುದು. ವಳಚ್ಚಿಲ್ ಜಂಕ್ಷನ್-ಬಿ.ಸಿ.ರೋಡ್ , ತುಂಬೆ ,ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು,ರಿಕ್ಷಾ,ಬೈಕ್) ವಳಚ್ಚಿಲ್‌ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು – ನೀರುಮಾರ್ಗ – ಬೈತುರ್ಲಿ – ನಂತೂರು ಮೂಲಕ ಸಂಚರಿಸುವುದು. ಅಡ್ಯಾರ್ ಕಟ್ಟೆ-ಬಿ.ಸಿ.ರೋಡ್ , ತುಂಬೆ , ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು,ರಿಕ್ಷಾ,ಬೈಕ್) ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ – ಕೊಣಾಜೆ – ದೇರಳಕಟ್ಟೆ – ತೊಕ್ಕೊಟ್ಟು ಮೂಲಕ ಸಂಚರಿಸುವುದು.
ಪಂಪ್‌ವೆಲ್ ಜಂಕ್ಷನ್- ಮಂಗಳೂರು ನಗರದ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನ ಗಳು ತೊಕ್ಕೊಟ್ಟು – ದೇರಳಕಟ್ಟೆ – ಮುಡಿಪು – ಬೊಳಿಯಾರ್ – ಮೆಲ್ಕಾರ್ ಮೂಲಕ ಸಂಚರಿಸುವುದು.