ಮಂಗಳೂರು: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಲಿದ್ದು, ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಸರ್ಪಗಾವು ಹಾಕಲಾಗಿದೆ. ಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ಪೊಲೀಸರು, ಅರೆಸೇನಾ ಪಡೆಯಿಂದ ಭದ್ರತೆ ಕಲ್ಪಿಸಲಾಗಿದೆ.
ಕರ್ನಾಟಕದಲ್ಲೇ ಅತೀ ದೊಡ್ಡ ಪ್ರತಿಭಟನೆಗೆ ಉಲೇಮಾ ಸಮನ್ವಯ ಸಮಿತಿ ಕರೆ ನೀಡಿದ್ದು, ನಗರದ ಅಡ್ಯಾರ್ ಕಣ್ಣೂರಿನ ಷಾ ಗಾರ್ಡನ್ ಮೈದಾನದಲ್ಲಿ ಸಂಜೆ 4 ಗಂಟೆಗೆ ಪ್ರತಿಭಟನಾ ಸಭೆ ಆರಂಭಗೊಳ್ಳಲಿದೆ. ಈ ಸಭೆಯಲ್ಲಿ ಇಸ್ಲಾಂ ಧರ್ಮದ ಧರ್ಮಗುರುಗಳು, ಧಾರ್ಮಿಕ ಮುಖಂಡರುಗಳು, ಉಲೇಮಾಗಳು ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಎಲ್ಲಾ ಮುಸ್ಮಿಮರನ್ನು ಕಡ್ಡಾಯ ಭಾಗಿಯಾಗಲು ಎಲ್ಲಾ ಮಸೀದಿ ಜಮಾತ್‌ನಲ್ಲೂ ಕರೆ ನೀಡಲಾಗಿದೆ.