ಬೆಂಗಳೂರು: ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಶೂಟೌಟ್ ನಡೆದ ಘಟನೆ ಮಧ್ಯರಾತ್ರಿ 1:30 ರ ಸುಮಾರಿಗೆ ವರದಿಯಾಗಿದೆ.
ಬಿಡದಿಯ ಮನೆಯಿಂದ ಬೆಂಗಳೂರಿಗೆ ಹೋಗ್ತಿದ್ದ ರಿಕ್ಕಿ ರೈ, ಈ ವೇಳೆ ಮನೆ ಹೊರಗಡೆಯ ಕೌಂಪೌಡ್ ಬಳಿ ಶೂಟೌಟ್ ನಡೆದಿದೆ.
ಡ್ರೈವರ್ ಹಾಗೂ ಗನ್ ಮ್ಯಾನ್ ಜೊತೆ ಫರ್ಚೂನರ್ ಕಾರ್ ನಲ್ಲಿ ಹೋಗ್ತಿದ್ದ ರಿಕ್ಕಿ ರೈ ಮೇಲೆ ಮೂರು ಸುತ್ತು ಗುಂಡಿನ ದಾಳಿ ನಡೆಸಿರೋ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಬಿಡದಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಶಿಫ್ಟ್ ಮಾಡಲಾಗಿದೆ.
ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ, ಡಿವೈಎಸ್ಪಿ ಶ್ರೀನಿವಾಸ್ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಬಿಡದಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.