ನವದೆಹಲಿ : ದೆಹಲಿಯ ಮುಸ್ತಫಾಬಾದ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಹಲವರು ಇನ್ನು ಕೂಡ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. ಈ ದುರಂತ ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ.
ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ದಿಲ್ಲಿ ಅಗ್ನಿಶಾಮಕ ದಳ ಮತ್ತು ದಿಲ್ಲಿ ಪೊಲೀಸರ ತಂಡ ತೆರಳಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. 14 ಮಂದಿಯನ್ನು ಈಗಾಗಲೇ ರಕ್ಷಿಸಲಾಗಿದೆ. 8 ರಿಂದ10 ಮಂದಿ ಇನ್ನು ಕೂಡ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆಯಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ ತಿಳಿಸಿದ್ದಾರೆ.
ಗಾಯಾಳುಗಳನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಿಲ್ಲಿಯ ಕೆಲ ಭಾಗಗಳಲ್ಲಿ ತಡರಾತ್ರಿ ಗಾಳಿ ಮತ್ತು ಗುಡುಗು ಸಹಿತ ಭಾರೀ ಮಳೆಯಾಗಿತ್ತು. ಆ ಬಳಿಕ ಕಟ್ಟಡ ಕುಸಿತ ಸಂಭವಿಸಿದೆ.