“ಧರ್ಮಸ್ಥಳ ಕ್ಷೇತ್ರ ಜನಸೇವೆ ಮಾಡುತ್ತ ಬಂದಿದೆ, ಧರ್ಮವನ್ನು ನಾವು ರಕ್ಷಣೆ ಮಾಡಬೇಕು” -ಡಿ.ಕೆ.ಶಿವಕುಮಾರ್

ಮಂಗಳೂರು: “ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು” ಎಂದು ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.


ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೆ ಭೇಟಿ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.


“ಧರ್ಮಸ್ಥಳ ಕ್ಷೇತ್ರ ಜನಸೇವೆ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು ಬಂದಿದೆ. ಇದಕ್ಕೆ ಸಹಕಾರ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ಕರಾವಳಿ ನಮ್ಮ ರಾಜ್ಯದ ಮುಖ್ಯವಾದ ಅಂಗ. ಮನುಷ್ಯನಿಗೆ ದೇಹದ ಅಂಗಗಳು ಎಷ್ಟು ಮುಖ್ಯವೋ, ಕರಾವಳಿ ಭಾಗವೂ ಅಷ್ಟೇ ಮುಖ್ಯ” ಎಂದು ಡಿಕೆಶಿ ತಿಳಿಸಿದರು.


ಇದಕ್ಕೂ ಮೊದಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.

error: Content is protected !!