ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದುಕೊಂಡುನೇಣು ಬಿಗಿದು ಆ*ತ್ಮಹ*ತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆಯ ಜಿಟ್ಟಿನಕಟ್ಟೆ ಗ್ರಾಮದ ಮದನಸ್ವಾಮಿ ಹಾಗೂ ಬಂಡ್ರಿ ಗ್ರಾಮದ ದೀಪಿಕಾ ಆ*ತ್ಮಹ*ತ್ಯೆ ಮಾಡಿಕೊಂಡ ಪ್ರೇಮಿಗಳು.
ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ನಂತರ ಇಬ್ಬರು ನಾಪತ್ತೆಯಾಗಿ, ಇದೀಗ ಹರಪ್ಪನಹಳ್ಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಮದನ ಸ್ವಾಮಿ ದೀಪಿಕಾ ಫಲಿತಾಂಶ ಪ್ರಕಟವಾದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರು ಕೂಡ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು. ಆದರೆ ರಿಸಲ್ಟ್ ದಿನದಿಂದ ನಾಪತ್ತೆಯಾಗಿದ್ದರು. ಎಲ್ಲಿ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇದೀಗ ಒಂದೇ ಮರದಲ್ಲಿ ಇಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರೂ ಕಾಲೇಜು ಕಲಿಯುವ ಸಮಯದಲ್ಲಿ ಪ್ರೀತಿಯ ಬಲೆಗೆ ಬಿದ್ದಿದ್ದರು. ಆದಷ್ಟು ಬೇಗ ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದು, ಆದರೆ ಇದಕ್ಕೆ ಸಂಬಂಧಿಕರ ಒಪ್ಪಿಗೆ ಸಿಕ್ಕಿರಲಿಲ್ಲ. ಕೊನೆಗೆ ಚೆಲುವಿನ ಚಿತ್ತಾರದಂತೆ ಓಡಿ ಹೋಗಿದ್ದು, ಆದರೆ ಎಲ್ಲೂ ಸರಿಯಾಗಿ ನೆಲೆಯೂರಲು ಸಾಧ್ಯವಾಗದೆ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.