ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಕೆಲ ತಿಂಗಳಿನಿಂದ ತಗ್ಗಿದ್ದ ಉಗ್ರರ ಉಪಟಳ ಮತ್ತೆ ಶುರುವಾಗಿದ್ದು, ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಕರ್ನಾಟಕದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಎಂಬುವವರು ಹತರಾಗಿದ್ದಾರೆ. ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ.
ಬೈಸರನ್ ನಲ್ಲಿ ಗುಂಪಾಗಿ ಊಟ ಮಾಡುತ್ತಿದ್ದ ಪ್ರವಾಸಿಗರ ಮೇಲೆ ದಾಳಿ ನಡೆದಿದ್ದು ಈ ವೇಳೆ ಐವರು ಮೃತಪಟ್ಟು 20 ಜನರಿಗೆ ಗಾಯವಾಗಿದೆ; ಎಲ್ ಇ ಟಿ ಶಾಖೆಯು ಹೊಣೆ ಹೊತ್ತಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹಲವಾರು ಪ್ರವಾಸಿಗರು ಗಾಯಗೊಂಡಿದ್ದಾರೆ. ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ನಲ್ಲಿ ಪ್ರವಾಸಿಗರ ಗುಂಪೊಂದು ಭಯೋತ್ಪಾದಕರ ದಾಳಿಗೆ ಒಳಗಾಗಿದೆ ಎಂದು ವರದಿಯಾಗಿದೆ. ಭಯೋತ್ಪಾದಕ ದಾಳಿಯಲ್ಲಿ 20ರಷ್ಟು ಪ್ರವಾಸಿಗರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ಪ್ರವಾಸಿ ರೆಸಾರ್ಟ್ ನ ಮೇಲಿನ ಹುಲ್ಲುಗಾವಲುಗಳಲ್ಲಿ ಗುಂಡಿನ ಸದ್ದು ಕೇಳಿಬಂದಿದೆ.
ಲಷ್ಕರ್-ಎ-ತೈಬಾ ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.