ಭೀಕರ ನರಮೇಧ ನಡೆಸಿದ ಉಗ್ರನ ಫೋಟೋ ಬಹಿರಂಗ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಉಗ್ರ ದಾಳಿಯಲ್ಲಿ ಇಪ್ಪತ್ತಾರು ಜನರು ಪ್ರಾಣ ಕಳೆದುಕೊಂಡಿದ್ದು, ಇಡೀ ದೇಶ ಶೋಕಸಾಗರದಲ್ಲಿ ಮುಳುಗಿದೆ. ಈ ದಾಳಿಯಲ್ಲಿ ಶಾಮೀಲಾಗಿದ್ದ ಉಗ್ರರ ಪೈಕಿ ಒಬ್ಬನ ಫೋಟೋ ಬಹಿರಂಗವಾಗಿದ್ದು ಕೈಯಲ್ಲಿ AK-47 ಬಂದೂಕು ಹಿಡಿದಿರುವುದು ಕಂಡುಬಂದಿದೆ. ಈತನ ಮುಖ ಮಾತ್ರ ಸ್ಪಷ್ಟವಾಗಿ ಕಾಣುತ್ತಿಲ್ಲ.


ಮಿನಿ ಸ್ವಿಟ್ಜರ್ ಲ್ಯಾಂಡ್ ಎಂಬ ಖ್ಯಾತಿಯ ಪಾಲ್ಘಾಮ್‌ನಲ್ಲಿ ನಿನ್ನೆ ಮಧ್ಯಾಹ್ನ 2:30 ರ ಸುಮಾರಿಗೆ ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿತ್ತು. ಪಾಕಿಸ್ಥಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೊಯ್ಬಾದ ಸ್ಥಳೀಯ ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ದಾಳಿಕೋರರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿವೆ. ಉಗ್ರ ದಾಳಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಬೇಕು ಎಂಬ ಒತ್ತಡ ಕೇಳಿಬಂದಿದೆ. ಇದೀಗ ಪಾಕ್‌ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಸೇರಿಸಲು ಸಕಾಲ ಎಂಬ ಮಾತುಗಳು ಕೇಳಿಬಂದಿದೆ.

ಇಬ್ಬರು ಉಗ್ರರ ಬೇಟೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಬುಧವಾರ ಉ*ಗ್ರರ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದ್ದು, ಇಬ್ಬರು ಶಾಸ್ತ್ರಧಾರಿ ಉ*ಗ್ರರನ್ನು ಹೊಡೆದುರುಳಿಸಿದೆ.
ಭಾರೀ ಗುಂಡಿನ ಚಕಮಕಿಯ ನಂತರ ಸೇನೆಯು ಇಬ್ಬರು ಉ*ಗ್ರರನ್ನು ತಟಸ್ಥಗೊಳಿಸಿದೆ. ಚಿನಾರ್ ಕಾಪ್ಸ್-ಇಂಡಿಯನ್ ಆರ್ಮಿ ಎಕ್ಸ್ ಹ್ಯಾಂಡಲ್ ಪೋಸ್ಟ್‌ನಲ್ಲಿ ಕಾರ್ಯಾಚರಣೆಯನ್ನು ದೃಢಪಡಿಸಿದೆ. ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಬಾರಾಮುಲ್ಲಾದ ಉರಿ ನಾಲಾದಲ್ಲಿರುವ ಸರ್ಜೀವನ್‌ನ ಸಾಮಾನ್ಯ ಪ್ರದೇಶದ ಮೂಲಕ ಮೂವರು ಉ*ಗ್ರರು ಒಳನುಸುಳಲು ಪ್ರಯತ್ನಿಸಿದ್ದಾರೆ ಎಂದು ಸೇನೆ ತಿಳಿಸಿದೆ. ಕಾಶ್ಮೀರದ ಶ್ರೀನಗರದಲ್ಲಿ ಬಂದ್ ವಾತಾವರಣ ಕಂಡು ಬಂದಿದ್ದು ಎಲ್ಲೆಡೆ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.

error: Content is protected !!