ಎ.28ರಿಂದ ನಾಲ್ಕು ದಿನ ಭಾರೀ ಮಳೆ ಸುರಿಯಲಿದೆ. ಎಲ್ಲೆಲ್ಲಿ?

ಬೆಂಗಳೂರು: ಎಪ್ರಿಲ್ 28ರಿಂದ ಮೇ 1ರವರೆಗೆ ನಾಲ್ಕು ದಿನ ರಾಜ್ಯಾದ್ಯಂತ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗ ಮತ್ತು ಒಳನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಏಪ್ರಿಲ್ 28ರವರೆಗೆ ಅಧಿಕ ತಾಪಮಾನದ ವಾತವರಣ ಮುಂದುವರಿಯಲಿದೆ. ಕೆಲವೆಡೆ ಲಘು ಮಳೆ ಆಗಬಹುದು. ನಂತರ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಇದಕ್ಕೆ ಬಂಗಾಳಕೊಲ್ಲಿ ಸಮುದ್ರ ಮೇಲ್ಮೈನಲ್ಲಿ ಸೃಷ್ಟಿಯಾಗಿ ಭೂಮಿ ಮೇಲ್ಮೈ ಮೇಲೆ ತೀವ್ರವಾಗಿ ಬೀಸುತ್ತಿರುವ ಚಂಡಮಾರುತ ಪರಿಚಲನೆ ಕಾರಣವಾಗಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಸುರಿಯಲಿದೆ. ನಾಲ್ಕು ದಿನ ಮಬ್ಬು ಕವಿಯುವ ಸಾಧ್ಯತೆ ಇದೆ. ಶುಷ್ಕ ವಾತಾವರಣ ಸಂಪೂರ್ಣ ಬದಲಾಗಲಿದೆ ಎಂದು ಊಹಿಸಲಾಗಿದೆ. ಈ ಅವಧಿಯಲ್ಲಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಾದ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆ ಆಗಬಹುದು ಎನ್ನಲಾಗಿದೆ.

error: Content is protected !!