ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ಆಡುತ್ತಿದ್ದ ಮೂವರು ಸೆರೆ

ಉಡುಪಿ : ಐಪಿಎಲ್‌ ಕ್ರಿಕೆಟ್‌ ಭರ್ಜರಿಯಾಗಿ ನಡೆಯುತ್ತಿದ್ದು, ಇದರ ಹೆಸರಲ್ಲಿ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 12,16,700 ರೂ. ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕುಂದಾಪುರ ಕೊರ್ಗಿಯ ಸಂದೀಪ್ (34), ಕುಂದಾಪುರ ಬೇಳೂರಿನ ಶ್ರೀರಾಜ್ (33) ಹಾಗೂ ಮೊಳಹಳ್ಳಿಯ ಮಧುಕರ್ (44) ಬಂಧಿತ ಆರೋಪಿಗಳು.

ಐಪಿಎಲ್‌ ಕ್ರಿಕೆಟ್‌ ಮ್ಯಾಚ್‌ ನಡೆಯುತ್ತಿದ್ದು, ಇದರ ಹೆಸರಲ್ಲಿ ಈ ಮೂವರೂ ಬೆಟ್ಟಿಂಗ್‌ ನಡೆಸುತ್ತಾ ಹಣ ಪೀಕಿಸುತ್ತಿದ್ದರು. ಬೇರೆ ಬೇರೆ ಜನರಿಗೆ ಕರೆ ಮಾಡಿ ನಿಮ್ಮ ತಂಡ ಯಾವುದು ಎಂದು ಕೇಳಿ ಅವರಿಂದ ಹಣ ಪಡೆದುಕೊಳ್ಳುತ್ತಿದ್ದರು. ಇದಕ್ಕಾಘಿ ಅಕ್ರಮ ಬೆಟ್ಟಿಂಗ್‌ ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡಿಕೊಂಡಿದ್ದರು ಎನ್ನಲಾಗಿದೆ.

ಆರೋಪಿಗಳಿಂದ ನಗದು, ಕಾರು ಮತ್ತು ಮೊಬೈಲ್ ಸೇರಿ ಒಟ್ಟು 12,16,700 ರೂ. ಮೊತ್ತದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಉಡುಪಿ ಸೆನ್ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!