ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್:‌ ನಟಿ ರನ್ಯಾ ರಾವ್‌ ಪಟಲಾಂ ಒಂದು ವರ್ಷ ಜೈಲಿನಿಂದ ಹೊರಬರುವಂತಿಲ್ಲ ಯಾಕೆ?

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ಗೆ ಸಂಬಂಧಿಸಿ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಮತ್ತು ಸಂಗಡಿಗರು 1 ವರ್ಷ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ. ಯಾಕೆಂದರೆ ರನ್ಯಾರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಈ ಕಾಯ್ದೆಯ ಪ್ರಕಾರ ಆಕೆಗೆ ಜಾಮೀನು ಪಡೆಯಲು ಸಾಧ್ಯವಾಗದ ಕಾರಣ ರನ್ಯಾರಾವ್ 1 ವರ್ಷ ಕಾಲ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಎದುರಾಗಿದೆ.

Ranya Rao Model Actress Latest Hot Images Black Dress

 

ರನ್ಯಾ ರಾವ್ ಹಾಗೂ ಈಕೆಯ ಪಟಲಾಂನ ತರುಣ್ ಕೊಂಡಾರಾಜ್ ಮತ್ತು ಸಾಹಿಲ್ ಜೈನ್ ವಿರುದ್ಧ 100 ಕೆಜಿಯಷ್ಟು ಚಿನ್ನವನ್ನು ವಿದೇಶದಿಂದ ಕಳ್ಳ ಸಾಗಾಣೆ ಮಾಡಿರುವ ಆರೋಪವಿರುವ ಕಾರಣ ಕಾಫಿಪೋಸಾ ಜಾರಿ ಮಾಡಲಾಗಿದೆ.

Who is Ranya Rao: 14 किलो सोने के साथ पकड़ी गई रान्‍या राव है कौन? एयरपोर्ट  पर मिल चुका था सिक्योरिटी क्लियरेंस तभी...

ಕಾಫಿಪೋಸಾ ಎಂದರೆ ವಿದೇಶಿ ವಿನಿಮಯ ನಿಯಂತ್ರಣ ಹಾಗೂ ಕಳ್ಳ ಸಾಗಾಣಿಕೆ ತಡೆ ಕಾಯ್ದೆಯಾಗಿದೆ. ಈ ಕಾಫಿಪೋಸಾ ಕಾಯ್ದೆಯನ್ನು ಕಳ್ಳಸಾಗಣೆ ಮಾಡುವವರ ವಿರುದ್ಧ ಹಾಕಲಾಗುತ್ತದೆ. ಆರೋಪಿಯು ಜಾಮೀನು ಪಡೆಯಬಾರದು ಎಂಬುದು ಇದರ ಮೂಲ ಉದ್ದೇಶವಾಗಿದೆ.

Ranya Rao

ಆರೋಪಿಯು ಜಾಮೀನು ಪಡೆದು ಹೊರಗೆ ಬಂದರೆ ನಿರಂತರವಾಗಿ ಮತ್ತೆ ಕಳ್ಳ ಸಾಗಾಣಿಕೆ ಮಾಡುತ್ತಾರೆ. ಅಲ್ಲದೇ ಜೈಲಿನಿಂದ ಬಂದ ಬಳಿಕ ತಪ್ಪಿಸಿಕೊಳ್ಳಬಹುದು.

gold smuggling case tarun raju ranya rao

ತನಿಖೆಗೆ ಸರಿಯಾಗಿ ಸಹಕಾರ ಕೊಡದೇ, ನಿರಂತರವಾಗಿ ಸ್ಮಗ್ಲಿಂಗ್‌ನಲ್ಲಿ ಮುಂದುವರೆಯುತ್ತಾರೆ ಎಂದು ಕಾಯ್ದೆ ಜಾರಿಗೊಳಿಸಲಾಗುತ್ತದೆ. ಕಾಫಿಪೋಸಾ ಕಾಯ್ದೆಯನ್ನು ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ ಜಾರಿ ಮಾಡುತ್ತದೆ. ಡಿಆರ್‌ಐ(ಕಂದಾಯ ಗುಪ್ತಚರ ನಿರ್ದೇಶನಾಲಯ)ಗೆ ಈ ವಿಚಾರವನ್ನು ಸಿಇಐಬಿಗೆ ವಿಚಾರ ನೀಡಬೇಕಿದೆ.

error: Content is protected !!