ಪಹಲ್ಗಾಂನಲ್ಲಿ ಪ್ರಾಣ ಕಳೆದುಕೊಂಡವರಿಗೆ NSEಯಿಂದ 1 ಕೋಟಿ, ಗಾಯಾಳುಗಳಿಗೆ Relianceನಿಂದ ಉಚಿತ ಚಿಕಿತ್ಸೆ

ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡ ಮೃತರ ಕುಟುಂಬಕ್ಕೆ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ ₹1 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದೆ. ಈ ಘೋಷಣೆಯನ್ನು ಎನ್‌ಎಸ್‌ಇಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಶಿಶ್‌ಕುಮಾರ್ ಚೌಹಾನ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.


ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯನ್ನು ಖ್ಯಾತ ಉದ್ಯಮಿ, ರಿಲಯನ್ಸ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ತೀವ್ರವಾಗಿ ಖಂಡಿಸಿದ್ದಾರೆ. ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಘಟನೆಯಲ್ಲಿ ಗಾಯಗೊಂಡವರಿಗೆ ರಿಲಯನ್ಸ್ ಫೌಂಡೇಶನ್ ವತಿಯಿಂದ ಉಚಿತ ಚಿಕಿತ್ಸೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ದಾಳಿಯಲ್ಲಿ ಗಾಯಗೊಂಡ ಎಲ್ಲರೂ ಶೀಘ್ರ ಮತ್ತು ಸಂಪೂರ್ಣವಾಗಿ ಚೇತರಿಕೆ ಕಾಣಲಿ ಅಂತ ನಾವು ಆಶಿಸುತ್ತೇವೆ. ಮುಂಬೈನಲ್ಲಿರುವ ನಮ್ಮ ರಿಲಯನ್ಸ್ ಫೌಂಡೇಶನ್ ಸರ್ ಎಚ್ಎನ್ ಆಸ್ಪತ್ರೆ ಎಲ್ಲಾ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುತ್ತದೆ ಎಂದು ಮುಕೇಶ್ ಅಂಬಾನಿ ಭರವಸೆ ನೀಡಿದ್ದಾರೆ.

error: Content is protected !!